ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶುಕ್ರವಾರದಂದು ಬೆಳಿಗ್ಗೆ ಸವಿತಾ ಮಹರ್ಷಿ, ಛತ್ರಪತಿ ಶಿವಾಜಿಯವರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಸವಿತಾ ಮಹರ್ಷಿ, ಛತ್ರಪತಿ ಶಿವಾಜಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.
ಡಿವೈಎಸ್ಪಿ ಬಿ.ಕೆ. ಉಮೇಶ್, ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಪೊಲೀಸ್ ಇನ್ಸ್ಪೆಕ್ಟರ್ ಶಿವರಾಜ್ ಮುಧೋಳ್, ಜಿ.ಪಿ.ರಾಜು ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ, ವೃತ್ತ ಕಛೇರಿಗಳಲ್ಲಿ ಹಾಗೂ ಡಿ.ಎ.ಆರ್.ನಲ್ಲಿ ಸವಿತಾ ಮಹರ್ಷಿ, ಛತ್ರಪತಿ ಶಿವಾಜಿಯವರ ಜಯಂತಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.