ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಪ ತ್ರಿ ಕಾ ಪ್ರ ಕ ಟ ಣೆ

ಕೆ.ಜಿ.ಎಫ್. : ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಕೆ.ಜಿ.ಎಫ್., ಅ. ೧೩ :

ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಭಾನುವಾರದಂದು ಬೆಳಿಗ್ಗೆ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಎಸ್‌ಪಿ ಎಂ.ಎಸ್. ಮೊಹಮ್ಮದ್ ಸುಜೀತ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿ, ಮಹರ್ಷಿ ವಾಲ್ಮೀಕಿ ರಾಮಾಯಣದಲ್ಲಿ ಬರೆದಿರುವ ಮೌಲ್ಯಗಳನ್ನ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದರು. ಭಾರತೀಯ ಸಂಸ್ಕೃತಿಯನ್ನ ಇಂದಿಗೂ ಉಳಿಸಿ ವಿಶ್ವಕ್ಕೆ ಮಾನವೀಯ ಮೌಲ್ಯಗಳನ್ನ ಸಾರಿದ ಮಹಾನ್‌ಚೇತನ ವಾಲ್ಮೀಕಿ ಮಹರ್ಷಿಗಳೆಂದರು. ಅದೇ ರೀತಿ ಸರ್ಕಾರವು ಮಹರ್ಷಿ ವಾಲ್ಮೀಕಿಯ ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ ಪುಸ್ತಕಗಳ ಮೂಲಕ ತಲುಪಿಸುವ ಕೆಲಸ ಮಾಡಿ, ಮಹರ್ಷಿ ವಾಲ್ಮೀಕಿ ವಿಶ್ವಮಾನವ ಎಂಬುದನ್ನು ಪ್ರತಿಯೊಬ್ಬರಿಗೂ ತಿಳಿಸುವ ಕೆಲಸ ಮಾಡಬೇಕೆಂದರು.

ಡಿವೈಎಸ್ಪಿ ಬಿ.ಎಲ್. ಶ್ರೀನಿವಾಸಮೂರ್ತಿ, ಆರ್.ಪಿ.ಐ. ಮಂಜುನಾಥ, ನಿಸ್ತಂತು ನಿರೀಕ್ಷಕ ಎನ್.ಉಮಾಶಂಕರ್, ಸಹಾಯಕ ಆಡಳಿತಾಧಿಕಾರಿ ಎಂ.ಮೂರ್ತಿ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ, ವೃತ್ತ ಕಛೇರಿಗಳಲ್ಲಿ ಹಾಗೂ ಡಿ.ಎ.ಆರ್.ನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮಾಡಲಾಯಿತು.

ಚಿತ್ರಶಿರ್ಷಿಕೆ: ೧೩ಕೆಜಿಎಫ್೦೧: ಕೆಜಿಎಫ್‌ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಎಸ್ಪಿ ಮೊಹಮ್ಮದ್ ಸುಜೀತ, ಡಿವೈಎಸ್ಪಿ ಶ್ರೀನಿವಾಸಮೂರ್ತಿ, ಎಎಓ ಮೂರ್ತಿ, ಇತರರು.

Leave a Reply

Your email address will not be published. Required fields are marked *