ದಲಿತ ಕುಂದುಕೊರತೆ ಸಭೆ

ಕೆಜಿಎಫ್., ಜು. ೧೦ :

ಕೆಜಿಎಫ್ ಪೊಲೀಸ್ ಜಿಲ್ಲೆಯ ದಲಿತ ಕುಂದುಕೊರತೆಗಳ ಸಭೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

ಅವರು ಕೆಜಿಎಫ್‌ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ದಲಿತ ಕುಂದುಕೊರತೆಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ದಲಿತರ ಸಮಸ್ಯೆಗಳಿಗೆ ಸ್ಪಂಧಿಸಿ, ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ಕರೆ ನೀಡಿದರು.

ದಲಿತ ಸಮುದಾಯದವರು ಪೊಲೀಸ್ ಇಲಾಖೆಗೆ ಸಂಬಂಧಿಸಿದ ತಂತಮ್ಮ ಸಮಸ್ಯೆಗಳ ಕುರಿತು ಆಗಿಂದಾಗ್ಗೆ ತಮ್ಮನ್ನು ಭೇಟಿಯಾಗಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಲು ಎಸ್.ಪಿ. ಮೊಹಮ್ಮದ್ ಸುಜೀತ ಅವರು ತಿಳಿಸಿದರು.

ಕೆಜಿಎಫ್ ಪೊಲೀಸ್ ಜಿಲ್ಲೆಯ ದಲಿತ ಸಂಘಟನೆಗಳವರು, ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು. ಪೌರಾಯುಕ್ತ ಶ್ರೀಕಾಂತ್, ಪಿಡಬ್ಲುಡಿ ಅಭಿಯಂತರ ಹನುಮಪ್ಪ, ಡಿವೈಎಸ್‌ಪಿ ಬಿ.ಎಲ್.ಶ್ರೀನಿವಾಸಮೂರ್ತಿ, ಪ್ರೊ|| ಡಿವೈಎಸ್ಪಿ ಮನೋಜ್‌ಕುಮಾರ್‌ನಾಯ್ಕ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *