ದಿನದ ಅಪರಾಧಗಳ ಪಕ್ಷಿನೋಟ 11ನೇ ಜುಲೈ 2018

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ 10.07.2018 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು. 

– ಅಸ್ವಾಭಾವಿಕ ಮರಣ :  01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಮಂಜುನಾಥ್ ಬಿನ್ ಮುನಿವೆಂಕಟಪ್ಪ, ತಿಮ್ಮಸಂದ್ರ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ಮಗಳಾದ ಸ್ವಾತಿ, 23 ವರ್ಷ ರವರನ್ನು 3 ವರ್ಷಗಳ ಹಿಂದೆ ಐನೋರಹೊಸಹಳ್ಳಿ ಗ್ರಾಮದ ವಿನಯ್ ಬಿನ್ ನಾರಾಯಣಸ್ವಾಮಿ ರವರಿಗೆ ವಿವಾಹ ಮಾಡಿಕೊಟ್ಟಿದ್ದು, ಇವರು ಅಮರಾವತಿ ಲೇಔಟ್ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಸ್ವಾತಿ ರವರಿಗೆ ಮದುವೆಯಾಗಿ 3 ವರ್ಷಗಳಾದರೂ ಮಕ್ಕಳಿಲ್ಲದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ:10.07.2018 ರಂದು ಮದ್ಯಾಹ್ನ 12.00 ಗಂಟೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಸೀಲಿಂಗ್ ಪ್ಯಾನಿಗೆ ವೇಲಿನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ.

Leave a Reply

Your email address will not be published. Required fields are marked *