ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ 10.01.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.
– ಅಸ್ವಾಭಾವಿಕ ಮರಣ ಪ್ರಕರಣ : 01
ಉರಿಗಾಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಗಿರೀಶ್ ಬಿನ್ ಗೋವಿಂದಪ್ಪ, ಕೂಡಗಲ್ಲು ಗ್ರಾಮ, ಕೆ.ಜಿ.ಎಫ್ ತಾಲ್ಲೂಕು ರವರ ತಂದೆ ಗೋವಿಂದಪ್ಪ, 60 ವರ್ಷ ರವರಿಗೆ 10 ವರ್ಷಗಳಿಂದ ನರಗಳ ದೌರ್ಬಲ್ಯ ಖಾಯಿಲೆಯಿದ್ದು, ಚಿಕಿತ್ಸೆ ಕೊಡಿಸಿದ್ದರೂ ವಾಸಿಯಾಗದೆ ಇದ್ದುದ್ದರಿಂದ, ಜೀವನದಲ್ಲಿ ಜಿಗುಪ್ಸೆಹೊಂದಿ ದಿನಾಂಕ: 09.01.2021 ರಂದು ರಾತ್ರಿ ಕೂಡಗಲ್ಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವರಾಂಡದ ತರಾಯಿಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.