ದಿನದ ಅಪರಾಧಗಳ ಪಕ್ಷಿನೋಟ 14ನೇ ಮಾರ್ಚ್ 2021

ಕೆ.ಜಿ.ಎಫ್. ಪೊಲೀಸ್ಜಿಲ್ಲೆಯ ವಿವಿಧ ಪೊಲೀಸ್ಠಾಣೆಗಳಲ್ಲಿ ದಿನಾಂಕ 13.03.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

ಅಸ್ವಾಭಾವಿಕ ಮರಣ ಪ್ರಕರಣ :  01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ.ಬಾಲರಾಜು ಬಿನ್ ವೆಂಕಟೇಶಪ್ಪ, ಕಾರಹಳ್ಳಿ ಗ್ರಾಮ, ಬಂಗಾರಪೇಟೆ ರವರ ಹೆಂಡತಿ ಶ್ರೀಮತಿ ಶೋಭ, 34 ವರ್ಷ ರವರು  ದಿನಾಂಕ 13.03.2021 ರಂದು ಬೆಳಿಗ್ಗೆ 6.00 ಗಂಟೆಯಲ್ಲಿ ಕಾರಹಳ್ಳಿ ಗ್ರಾಮದಲ್ಲಿರುವ ತೋಟದಲ್ಲಿ ಹುಲ್ಲನ್ನು ಕೊಯ್ಯುತ್ತಿರುವಾಗ ಯಾವುದೋ ಒಂದು ವಿಷಹಾವು ಶೋಭ ರವರ ಬಲಗೈ ಬೆರಳಿಗೆ ಕಚ್ಚಿದ್ದು, ಕೂಡಲೇ ಚಿಕಿತ್ಸೆಗಾಗಿ ಕೋಲಾರ ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಶೋಭ ರವರಿಗೆ ಚಿಕಿತ್ಸೆ ಫಲಕಾರಿಯಾಗದೇ ಬೆಳಿಗ್ಗೆ 8.00 ಗಂಟೆಗೆ ಮೃತಪಟ್ಟಿರುತ್ತಾರೆ.

Leave a Reply

Your email address will not be published. Required fields are marked *