ದಿನದ ಅಪರಾಧಗಳ ಪಕ್ಷಿನೋಟ 14 ನೇ ಜನವರಿ 2021

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ 13.01.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

ಅಸ್ವಾಭಾವಿಕ ಮರಣ ಪ್ರಕರಣ :  01

ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಲೋಕೇಶ್ ಬಿನ್ ಕೃಷ್ಣಪ್ಪ, ಚಾಮನಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ತಂದೆ  ಕೃಷ್ಣಪ್ಪ, 66 ವರ್ಷ ರವರು ದಿನಾಂಕ 11.01.2021 ರಂದು ಮದ್ಯಾಹ್ನ 3.30 ಗಂಟೆಯಲ್ಲಿ ಮನೆಯಿಂದ ಹೊರೆಗೆ ಹೋದವರು ತೊಪ್ಪನಹಳ್ಳಿ ಕೊಟೆ ಕೆರೆಯ ನೀರಿನಲ್ಲಿ ಕೈ ಕಾಲುಗಳನ್ನು ತೊಳೆಯಲು ಹೋಗಿ ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುತ್ತಾರೆ.

Leave a Reply

Your email address will not be published. Required fields are marked *