ದಿನದ ಅಪರಾಧಗಳ ಪಕ್ಷಿನೋಟ 17 ನೇ ಆಗಸ್ವ್ 2019

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ:16.08.2019 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

– ಅಸ್ವಾಭಾವಿಕ ಮರಣ ಪ್ರಕರಣ :01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಅಸ್ವಾಬಾವಿಕ ಮರಣದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 16-08-2019 ರಂದು ಬೆಳಗ್ಗೆ 11-30 ಗಂಟೆಯಲ್ಲಿ ದೂರುದಾರರಾದ ಶ್ರೀ. ಸುಕೂರ್‌ ಬಿನ್‌ ಬಾಬು ಸೇಠ್ ದೇಶಿಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ ಬಾಬು ಸೇಠ್‌ ರವರು ಅಯ್ಯಪ್ಪಸ್ವಾಮಿ ದೇವಾಲಯದ ಹಿಂಭಾಗದಲ್ಲಿರುವ ಕೆರೆಗೆ ಭಹಿರ್ದೆಸೆಗೆ ಹೋಗಿ ಬರುವುದಾಗಿ ದೂರುದಾರರಿಗೆ ಹೇಳಿ ಹೋದವರು ಸುಮಾರು ಹೊತ್ತಾದರೂ ವಾಪಸ್ಸು ಬಾರದೇ ಇದ್ದು ದೂರುದಾರರು ಸ್ಥಳಕ್ಕೆ ಹೋಗಿ ನೋಡಲಾಗಿ ಕೆರೆಯ ಕಟ್ಟೆಯ ಬಳಿ ಕುಸಿದು ಬಿದ್ದಿದ್ದು ದೂರುದಾರರು ಎಬ್ಬಿಸಿದರೂ ಮಾತನಾಡದೇ ಇದ್ದು ಬಾಬು ಸೇಠ್‌ ದೇಶಿಹಳ್ಳಿ ಗ್ರಾಮ ರವರನ್ನು ಬಂಗಾರಪೆಟೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *