ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ 21.09.2020 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.
– ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01
ಉರಿಗಾಂ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಸಂಬಂಧ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ. ಬಾನು ಕೊಂ ಪುರುಷೋತ್ತಮ್, ಎನ್.ಟಿ ಬ್ಲಾಕ್, ಉರಿಗಾಂ, ಕೆ.ಜಿ.ಎಫ್ ರವರ ಮಗಳು ಕುಮಾರಿ ಅನಿಶಾ, 19 ವರ್ಷ ರವರು ದಿನಾಂಕ:17.09.2020 ರಂದು ಬೆಳಿಗ್ಗೆ 10.30 ಗಂಟೆಯಲ್ಲಿ ಸ್ನೇಹಿತಳಿಗೆ ಪುಸ್ತಕವನ್ನು ಕೊಟ್ಟು ಬರುತ್ತೇನೆಂದು ಹೇಳಿ ಮನೆಯಿಂದ ಹೋದವಳು ಮನೆಗೆ ಬರದೆ ಕಾಣೆಯಾಗಿರುತ್ತಾಳೆ.
– ಅಸ್ವಾಭಾವಿಕ ಮರಣ ಪ್ರಕರಣ : 01
ಉರಿಗಾಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಗೋವಿಂದರಾಜ್ ಬಿನ್ ಚಂದ್ರನ್, ಎನ್.ಟಿ ಬ್ಲಾಕ್, ಉರಿಗಾಂ, ಕೆ.ಜಿ.ಎಫ್ ರವರ ಮಗನಾದ ರೋಷನ್, 16 ವರ್ಷ ರವರಿಗೆ ಒಂದು ವರ್ಷದಿಂದ ಹೊಟ್ಟೆ ನೋವು ಬರುತ್ತಿದ್ದು, ಚಿಕಿತ್ಸೆ ಕೊಡಿಸಿದ್ದರೂ ಸಹಾ ವಾಸಿಯಾಗದೆ ಇದ್ದುದರಿಂದ ರೋಷನ್ ಜಿಗುಪ್ಸೆ ಹೊಂದಿ ದಿನಾಂಕ: 21.09.2020 ರಂದು ಬೆಳಿಗ್ಗೆ 9.30 ಗಂಟೆಗೆ ಮನೆಯ ರೂಂನ ಮೇಲ್ಚಾವಣಿಯ ಕಬ್ಬಿಣದ ಪೈಪಿಗೆ ವೇಲ್ ನಿಂದ ನೇಣು ಹಾಕಿಕೊಂಡು ಮೃತಪಟ್ಟಿರುತ್ತಾರೆ.