ದಿನದ ಅಪರಾಧಗಳ ಪಕ್ಷಿನೋಟ 25ನೇ ಫೆಬ್ರವರಿ 2021

ಕೆ.ಜಿ.ಎಫ್. ಪೊಲೀಸ್ಜಿಲ್ಲೆಯ ವಿವಿಧ ಪೊಲೀಸ್ಠಾಣೆಗಳಲ್ಲಿ ದಿನಾಂಕ 24.02.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

ರಸ್ತೆ ಅಪಘಾತಗಳು : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ನಂದೀಶ್‌ ಬಿನ್ ಲಕ್ಷ್ಮೇಗೌಡ, ಐನೋರಹೊಸಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ತಂದೆ ಲಕ್ಷ್ಮೇಗೌಡ ರವರು  ದಿನಾಂಕ 22.02.2021 ರಂದು ಮದ್ಯಾಹ್ನ 12.30 ಗಂಟೆಯಲ್ಲಿ ಆಕ್ಟಿವಾ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-08-ಯು-8934 ರಲ್ಲಿ ಐನೋರಹೊಸಹಳ್ಳಿ ಗ್ರಾಮಕ್ಕೆ ಹೋಗಲು ಹುಣಸನಹಳ್ಳಿ ಬ್ರಿಡ್ಜ್ ಬಳಿ ರಸ್ತೆಯ ಹೋಗುತ್ತಿದ್ದಾಗ, ಬೂದಿಕೋಟೆ ಕಡೆಯಿಂದ ಡಿವೈಡರ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಪಲ್ಸರ್ ಸಂಖ್ಯೆ ಕೆಎ-08-ಇಎ-1258 ನ್ನು ಅದರ ಸವಾರನು ಅತಿವೇಗ & ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಲಕ್ಷ್ಮೇಗೌಡ ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಪಡಿಸಿದ ಪರಿಣಾಮ, ಲಕ್ಷ್ಮೇಗೌಡ ರವರು ವಾಹನ ಸಮೇತ ಕೆಳಗೆ ಬಿದ್ದಾಗ, ಗಾಯಗಳಾಗಿರುತ್ತದೆ.

ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಶಶಿಕುಮಾರ್‌ ಬಿನ್ ಶಂಕರಪ್ಪ, ದೊಡ್ಡಅಂಕಾಂಡಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ತಂಗಿಯಾದ ಕು|| ಬಿಂದು.ಡಿ.ಎಸ್, 22 ವರ್ಷ ರವರು ದಿನಾಂಕ 22.02.2021 ರಂದು ಮದ್ಯಾಹ್ನ 12.00 ಗಂಟೆಯಲ್ಲಿ ದೊಡ್ಡ ಅಂಕಂಡಹಳ್ಳಿ ಗ್ರಾಮದಲ್ಲಿರುವ ಅವರ ತೋಟದ ಮನೆಯಿಂದ ದೊಡ್ಡಅಂಕಂಡಹಳ್ಳಿ ಸರ್ಕಾರಿ ಶಾಲೆಯ ಬಳಿ ಹೋಗಿ ಬರುವುದಾಗಿ ತಿಳಿಸಿ ಹೋದವರು ಪುನಃ ಮನೆಗೆ ವಾಪಸ್ಸು ಬರದೇ ಕಾಣೆಯಾಗಿರುತ್ತಾರೆ.

Leave a Reply

Your email address will not be published. Required fields are marked *