ದಿನದ ಅಪರಾಧಗಳ ಪಕ್ಷಿನೋಟ 26ನೇ ಜೂನ್ 2020

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ  25.06.2020 ರಂದು  ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

– ಅಸ್ವಾಭಾವಿಕ ಮರಣ ಪ್ರಕರಣ : 01

ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಕೃಷ್ಣಪ್ಪ ಬಿನ್ ಈರಪ್ಪ, ಹುರ್‍ಲಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ಮಗನಾದ ಬಾಸ್ಕರ್, 19 ವರ್ಷ ರವರಿಗೆ ಆಗಾಗ  ಹೊಟ್ಟೆ ನೋವು ಬರುತ್ತಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದರು ವಾಸಿಯಾಗದೇ ಇದ್ದುದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 24.06.2020 ರಂದು ಸಂಜೆ 5.00 ಗಂಟೆಯಿಂದ ದಿನಾಂಕ  25.06.2020 ರಂದು ಬೆಳಿಗ್ಗೆ 7.30 ಗಂಟೆಯ ಮದ್ಯೆ ದೂರುದಾರರ ತೋಟದಲ್ಲಿ ಮಾವಿನ ಮರಕ್ಕೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

Leave a Reply

Your email address will not be published. Required fields are marked *