ದಿನದ ಅಪರಾಧಗಳ ಪಕ್ಷಿನೋಟ 26ನೇ ಸೆಪ್ಟೆಂಬರ್ 2020

ಕೆ.ಜಿ.ಎಫ್. ಪೊಲೀಸ್ಜಿಲ್ಲೆಯ ವಿವಿಧ ಪೊಲೀಸ್ಠಾಣೆಗಳಲ್ಲಿ ದಿನಾಂಕ 25.09.2020 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

 

ಅಸ್ವಾಭಾವಿಕ ಮರಣ ಪ್ರಕರಣ :  01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಶ್ರೀನಿವಾಸ, ಸಿ.ಹೆಚ್.ಸಿ 15, ಬಂಗಾರಪೇಟೆ ಪೊಲೀಸ್ ಠಾಣೆ ರವರು ದಿನಾಂಕ 25.09.2020 ರಂದು ಸಂಜೆ 4.00 ಗಂಟೆಯಲ್ಲಿ ಬಂಗಾರಪೇಟೆ ಬಸ್ ನಿಲ್ದಾಣದ ಬಳಿ ಗಸ್ತಿನಲ್ಲಿದ್ದಾಗ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯಿರುವ ಬ್ರಿಡ್ಜ್ ಹತ್ತಿರ ಸುಮಾರು 40-45 ವರ್ಷವುಳ್ಳ ಅನಾಮದೇಯ ಗಂಡಸು ಮಲಗಿಕೊಂಡಂತೆ ಇರುವುದು ಕಂಡು ಬಂದಿದ್ದು, ನೋಡಲಾಗಿ ಸದರಿ ವ್ಯಕ್ತಿಯು ಆಹಾರವಿಲ್ಲದೆ ಅಥವಾ ಯಾವುದೋ ಖಾಯಿಲೆಯಿಂದ ಬಳಲಿ ಮೃತಪಟ್ಟಿರುತ್ತಾರೆ.

Leave a Reply

Your email address will not be published. Required fields are marked *