ದಿನದ ಅಪರಾಧಗಳ ಪಕ್ಷಿನೋಟ 26ನೇ ನವೆಂಬರ್ 2020

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಕ 25.11.2020 ರಂದು  ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

ಅಸ್ವಾಭಾವಿಕ ಮರಣ ಪ್ರಕರಣ :  01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ. ಮಂಗಮ್ಮ, ನೆರ್‍ನಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ಗಂಡ ಚಂದ್ರಪ್ಪ, 45 ವರ್ಷ ರವರಿಗೆ ಐದಾರು ವರ್ಷಗಳಿಂದ ಹೊಟ್ಟೇನೋವು ಬರುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರೂ ಸಹ ಗುಣಮುಖವಾಗದೇ ಇದ್ದುದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 24.11.2020 ರಂದು ಸಂಜೆ 6.00 ಗಂಟೆಯಿಂದ ದಿನಾಂಕ 25.11.2020 ರಂದು ಬೆಳಿಗ್ಗೆ 11.30 ಗಂಟೆ ಮಧ್ಯೆ ನೆರ್ನಹಳ್ಳಿ ಗ್ರಾಮದ ಹನುಮಪ್ಪ ರವರ ಇಟ್ಟಿಗೆ ಪ್ಯಾಕ್ಟರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

Leave a Reply

Your email address will not be published. Required fields are marked *