ದಿನದ ಅಪರಾಧಗಳ ಪಕ್ಷಿನೋಟ 27 ನೇ ಜನವರಿ 2021

ಕೆ.ಜಿ.ಎಫ್. ಪೊಲೀಸ್ಜಿಲ್ಲೆಯ ವಿವಿಧ ಪೊಲೀಸ್ಠಾಣೆಗಳಲ್ಲಿ ದಿನಾಂಕ 26.01.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

ಮಹಿಳೆ ಮೇಲೆ ನಡೆದ ದೌರ್ಜನ್ಯ ಪ್ರಕರಣ : 01

ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಮಂಜುನಾಥ ಬಿನ್ ಉಚ್ಚಪ್ಪ, ಚಿನ್ನಾಗನಹಳ್ಳಿ ಗ್ರಾಮ, ಕೆ.ಜಿ.ಎಫ್ ತಾಲ್ಲೂಕು ರವರ ಮಗಳಾದ ಆಶಾ ಎಂ, 19 ವರ್ಷ ರವರು  ದಿನಾಂಕ 23.01.2021  ರಂದು ಬೆಳಿಗ್ಗೆ 10.00 ಗಂಟೆಯಲ್ಲಿ ಸುಭಾಷಿಣಿ ಮಹಿಳಾ ಪದವಿ ಪೂರ್ವ ಕಾಲೇಜು ಬಳಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಮನೆಗೆ ಬಾರದೇ ಕಾಣೆಯಾಗಿರುತ್ತಾರೆ.

ಅಸ್ವಾಭಾವಿಕ ಮರಣ ಪ್ರಕರಣ :  01

ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಕೃಷ್ಣಪ್ಪ ಬಿನ್ ಬೈರಪ್ಪ, ಗೆನ್ನೇರಹಳ್ಳಿ ಗ್ರಾಮ, ಕೆ.ಜಿ.ಎಫ್ ತಾಲ್ಲೂಕು  ರವರ  ಮಗ ನವೀನ್, 23 ವರ್ಷ ರವರು  ದಿನಾಂಕ- 25-01-2021 ರಂದು ಬೆಳಿಗ್ಗೆ 9.00 ಗಂಟೆಯಿಂದ ದಿನಾಂಕ- 26-01-2021  ರಂದು ಬೆಳಿಗ್ಗೆ 8.30 ಗಂಟೆಯ ಮದ್ಯೆ ಯಾವುದೋ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆ ಗೊಂಡು ಗೆನ್ನೇರಹಳ್ಳಿ ಗ್ರಾಮದ ಮನೋಹರ್ ರೆಡ್ಡಿ ರವರ ತೋಟದಲ್ಲಿರುವ ಹುಣಸೆಮರದ ಕೊಂಬೆಗೆ  ನೇಣು ಹಾಕಿಕೊಂಡು ಮೃತಪಟ್ಟಿರುತ್ತಾರೆ.

Leave a Reply

Your email address will not be published. Required fields are marked *