ದಿನದ ಅಪರಾಧಗಳ ಪಕ್ಷಿನೋಟ 28 ನೇ ಸೆಪ್ಟೆಂಬರ್‌ 2019

ಕೆ.ಜಿ.ಎಫ್ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ:27.09.2019 ರಂದು  ದಾಖಲಾಗಿರುವ  ಅಪರಾಧ ಪ್ರಕರಣಗಳ ವಿವರಗಳು.

– ರಸ್ತೆ ಅಪಘಾತಗಳು :  01

ಬೇತಮಂಗಲ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ. ನಾರಾಯಣಮ್ಮ ಕೊಂ ಮುನಿಶಾಮಿ, ಮುದ್ದೇಗೌಡನಹಳ್ಳಿ ಗ್ರಾಮ, ಕೆ.ಜಿ.ಎಫ್ ತಾಲ್ಲೂಕು ರವರು ದಿನಾಂಕ:25.09.2019 ರಂದು ಸಂಜೆ 06.30 ಗಂಟೆಯಲ್ಲಿ ಗಂಡ ಮುನಿಶಾಮಿ ರವರೊಂದಿಗೆ ದ್ವಿಚಕ್ರವಾಹನ ಟಿವಿಎಸ್ ಎಕ್ಸ್ಎಲ್ ಸಂಖ್ಯೆ ಕೆಎ 40-ಇ-136ರಲ್ಲಿ ಹಿಂಬದಿಯಲ್ಲಿ ಕುಳಿತುಕೊಂಡು ಬೇತಮಂಗಲ ಕ್ಯಾಸಂಬಳ್ಳಿ ರಸ್ತೆ ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಇರುವ ಶ್ರಿ ಸುಬ್ರಮಣ್ಯಸ್ವಾಮಿ ದೇವಾಲಯದ ಬಳಿ ಹೋಗುತ್ತಿದ್ದಾಗ, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಸಂಖ್ಯೆ ಎಪಿ-03-ಸಿಡಿ-3414 ರ ಚಾಲಕ ಯಾವುದೇ ಸೂಚನೆಯನ್ನು ನೀಡದೆ ಬ್ರೇಕ್ ಹಾಕಿದ್ದರಿಂದ ದೂರುದಾರರ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಮುನಿಶಾಮಿ ಮತ್ತು ದೂರುದಾರರಿಗೆ ಗಾಯಗಳಾಗಿರುತ್ತದೆ.

Leave a Reply

Your email address will not be published. Required fields are marked *