ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಹಾರ್ಥಿಕ ಬಿಳ್ಕೋಡುಗೆ

ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಹಾರ್ಥಿಕ ಬಿಳ್ಕೋಡುಗೆ

ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ ಆ.೩೧ ರಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ೦೩ ಮಂದಿ ಪೊಲೀಸ್ ಅಧಿಕಾರಿಗಳಿಗೆ ಹಾರ್ಥಿಕ ಬಿಳ್ಕೋಡುಗೆ, ಸನ್ಮಾನ ಕಾರ್ಯಕ್ರಮವನ್ನು ಶುಕ್ರವಾರದಂದು ಸಂಜೆ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಎಂ.ಎಸ್. ಮಹಮ್ಮದ್ ಸುಜೀತ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೇವೆಯಲ್ಲಿರುವಾಗ ಪ್ರತಿಯೊಬ್ಬ ಸರ್ಕಾರಿ ನೌಕರರು ಉತ್ತಮವಾದ ಸೇವೆಯನ್ನು ಸಲ್ಲಿಸುವ ಮೂಲಕ, ಅವರ ಸೇವೆಯು ಮುಂದಿನ ಜನಾಂಗಕ್ಕೆ ಆದರ್ಶವಾಗುವ ಮೂಲಕ ಜನಸಾಮಾನ್ಯರ ಮನಗೆಲ್ಲುವ ಕಾರ್ಯ ಮಾಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಮಹಮ್ಮದ್ ಸುಜೀತ ಅವರು ಕರೆ ನೀಡಿದರು.

ಆ.೩೧ ರಂದು ನಿವೃತ್ತರಾದ ಅಧಿಕಾರಿಗಳು ಬೇತಮಂಗಲ ಎಎಸ್‌ಐ ಆರ್.ಗಂಗಪ್ಪ, ಉರಿಗಾಂ ಎಎಸ್‌ಐ ಎನ್.ವೆಂಕಟೇಶರೆಡ್ಡಿ ಮತ್ತು ಚಾಂಫೀಯನ್‌ರೀಫ್ಸ್ ಮುಖ್ಯಪೇದೆ ಪಿಳ್ಳಪ್ಪ ರವರುಗಳು ಪೊಲೀಸ್ ಇಲಾಖೆಯ ವಿವಿಧ ವಿಭಾಗ, ಠಾಣೆ, ಕಛೇರಿಗಳಲ್ಲಿ ತಮ್ಮ ಸೇವಾವಧಿಯಲ್ಲಿ ಅರ್ಥಪೂರ್ಣ ಸೇವೆಯನ್ನು ಸಲ್ಲಿಸುವ ಮೂಲಕ ಯಶಸ್ವಿಯಾಗಿರುತ್ತಾರೆ. ಇವರುಗಳ ಸೇವೆ, ಅನುಭವವು ಎಲ್ಲರಿಗೂ ಮಾರ್ಗದರ್ಶನವಾಗಲೆಂದರು. ಉದ್ಯೋಗಿಗಳಿಗೆ ಸರ್ಕಾರಿ ಸೇವೆಗೆ ಸೇರಿದ ಮೇಲೆ, ನಿವೃತ್ತಿಯು ಕಡ್ಡಾಯವಾಗಿ ಇದ್ದೇ ಇರುತ್ತದೆ, ಇರುವುದರೊಳಗೆ ಉತ್ತಮವಾದ ರೀತಿಯಲ್ಲಿ ಸೇವೆಯನ್ನು ಸಲ್ಲಿಸಬೇಕೆಂದರು. ನೈತಿಕ ಬೆಂಬಲದೊಂದಿಗೆ ಉತ್ತಮ ಬಾಂಧವ್ಯದ ಪರಿಸರದಲ್ಲಿ ಸರ್ಕಾರಿ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸುವ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಎಂ.ಎಸ್. ಮಹಮ್ಮದ್ ಸುಜೀತ ಅವರು ಕರೆ ನೀಡಿದರು.

ನಿವೃತ್ತರಾದವರಿಗೆ ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ, ಸನ್ಮಾನಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಬಿ.ಎಲ್. ಶ್ರೀನಿವಾಸಮೂರ್ತಿ, ಪ್ರಭಾರ ಸಹಾಯಕ ಆಡಳಿತಾಧಿಕಾರಿ ಎಂ.ಮೂರ್ತಿ, ಪೊಲೀಸ್ ಇನ್ಸ್‌ಪೆಕ್ಟರ್ ಎಲ್. ಆಂಜಪ್ಪ, ಬೇತಮಂಗಲ ಪಿಎಸ್‌ಐ ಸುನಿಲ್‌ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಠಾಣಾಧಿಕಾರಿಗಳು, ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *