ಭಯೋತ್ಪಾದನಾ ವಿರೋದಿ ದಿನ ಪ್ರಮಾಣ ವಚನ

ಕೆಜಿಎಫ್., ಮೇ ೨೧ :

ಕೆಜಿಎಫ್‌ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಮಂಗಳವಾರದಂದು ಆಚರಿಸಿ, ಪ್ರಮಾಣ ವಚನ ಸ್ವೀಕಾರ ಮಾಡಲಾಯಿತು.

ಪ್ರತಿಜ್ಞಾ ವಿದಿಯನ್ನು ಡಿಸಿಐಬಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ. ಶಂಕರಪ್ಪ ಅವರು ಬೋಧಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತಾ, ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ವಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತಾಧಿಕಾರಿ ಎಂ.ಮೂರ್ತಿ, ಪೊಲೀಸ್ ಇನ್ಸ್‌ಪೆಕ್ಟರ್ ಹೆಚ್.ಆರ್.ಸಿದ್ದಪ್ಪ, ಎನ್.ಉಮಾಶಂಕರ್, ಪೊಲೀಸ್ ಅಧೀಕ್ಷಕರ ಆಪ್ತ ಸಹಾಯಕ ವಿ.ಮಂಜುನಾಥ, ಪಿಎಸ್‌ಐ ವಿ.ಶಿವಕುಮಾರ್, ನಾಗಪ್ಪ ಮಲ್ಲಪ್ಪ ಖಾನಾಪುರ, ಎಎಸ್‌ಐಗಳಾದ ಎನ್.ಜಿ.ಚೌಡಪ್ಪ, ಎನ್.ಆನಂದ್, ಸಿ.ಎಂ.ರಾಮಪ್ಪ, ಬಿ.ಕೃಷ್ಣಪ್ಪ, ನಾರಾಯಣಸ್ವಾಮಿ, ಜಿಲ್ಲಾ ಪೊಲೀಸ್ ಕಛೇರಿಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಹಾಗೂ ಇಲಾಖೆಯ ಎಲ್ಲಾ ಕಛೇರಿಗಳಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಿ, ಪ್ರಮಾಣ ವಚನ ಸ್ವೀಕಾರ ಮಾಡಲಾಯಿತು.

Leave a Reply

Your email address will not be published. Required fields are marked *