ಭ್ರಷ್ಟಾಚಾರ ತಡೆಗಟ್ಟುವ ದಿನಾಚರಣೆ

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿಂದು ಭ್ರಷ್ಟಾಚಾರ ತಡೆಗಟ್ಟುವ ದಿನವನ್ನು ಆಚರಣೆ ಮಾಡಿ, ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ಬೆಂಬಲಿಸುವ ಕುರಿತು ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಐಬಿ ಇನ್ಸ್‌ಪೆಕ್ಟರ್ ಜಿ.ಪಿ.ರಾಜು ಅವರ ನೇತೃತ್ವದಲ್ಲಿ ನಡೆದ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು, ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ದಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆಯೆಂದು ನಾವು ನಂಬುತ್ತಾ, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ, ನಾಗರಿಕರು…

Continue reading

ಪತ್ರಿಕಾ ಪ್ರಕಟಣೆ – ಅಕ್ರಮ ದಾಸ್ತಾನು ಗಾಂಜಾ ವಶ, ಪ್ರಕರಣ ದಾಖಲು

ಕೆಜಿಎಫ್ ಪೊಲೀಸ್ ಜಿಲ್ಲೆಯ ಮಾರಿಕುಪ್ಪಂ ಸರಹದ್ದಿನಲ್ಲಿರುವ ಕೃಷ್ಣಗಿರಿ ಲೈನಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು ಒಂದೂಕಾಲು ಕೋಟಿ ರೂಪಾಯಿ ಮೌಲ್ಯದ 229 ಕೆಜಿ ಗಳಷ್ಟು ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಕೆಜಿಎಫ್ ಪೊಲೀಸ್ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿರುವುದಾಗಿ ಶ್ರೀ.ಸೀಮಾಂತ ಕುಮಾರ್ ಸಿಂಗ್, ಐ.ಪಿ.ಎಸ್‌,  ಪೊಲೀಸ್ ಮಹಾ ನಿರೀಕ್ಷಕರು,  ಕೇಂದ್ರ ವಲಯ ಅವರು ತಿಳಿಸಿದರು.   ಕೆಜಿಎಫ್ ಮಾರಿಕುಪ್ಪಂ ಸರಹದ್ದು ಕೃಷ್ಣಗಿರಿ ಲೈನಿನಲ್ಲಿ ಪೌಳಿ, ಜೋಸೆಫ್ ಮತ್ತು ರಾಜ @ ಪಲ್ಲುರಾಜು ಎಂಬುವವರು ಅಕ್ರಮವಾಗಿ…

Continue reading

ಪತ್ರಿಕಾ ಪ್ರಕಟಣೆ: ಸಿವಿಲ್ ಪೊಲೀಸ್ ಲಿಖಿತ ಪರೀಕ್ಷೆ ಯಶಸ್ವಿ

ದಿನಾಂಕ 20.09.2020, ಭಾನುವಾರದಂದು ಸಿವಿಲ್ ಪೊಲೀಸ್ ಹುದ್ದೆಯ ಸಿ.ಇ.ಟಿ. ಪರೀಕ್ಷೆಯನ್ನು ಮುಕ್ತವಾಗಿ, ಸಂಪೂರ್ಣ ಶಾಂತಿಯುತವಾಗಿ, ಯಶಸ್ವಿಯಾಗಿ ನಡೆಸಲಾಗಿದೆ. ಬೆಳಿಗ್ಗೆ 11.00 ರಿಂದ 12.30 ರ ವರೆಗೆ ಉರಿಗಾಂನಲ್ಲಿನ ಕೆಜಿಎಫ್ ಪ್ರಥಮ ದರ್ಜೆ ಕಾಲೇಜ್ ಮತ್ತು ಕೆಜಿಎಫ್ನ ಶ್ರೀ ಭಗವಾನ್ ಮಹಾವೀರ್ ಜೈನ್ ಕಾಲೇಜಿನಲ್ಲಿ ಏಕಕಾಲದಲ್ಲಿ ನಡೆಸಿದ ಸಿವಿಲ್ ಪೊಲೀಸ್ ಸಿ.ಇ.ಟಿ. ಲಿಖಿತ ಪರೀಕ್ಷೆಯನ್ನು ನಡೆಸಲಾಗಿದೆ. ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಖಾಲಿ ಇರುವ ನಾಗರೀಕ ಮತ್ತು ಮಹಿಳಾ ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆಗಳನ್ನು…

Continue reading

ಸೆ. ೨೦ಕ್ಕೆ ಪೊಲೀಸ್ ಸಿ.ಇ.ಟಿ. ಪರೀಕ್ಷೆಗೆ ಸರ್ವ ಸಿದ್ದ

ಸೆ. ೨೦ ಭಾನುವಾರದಂದು ನಡೆಯುವ ಪೊಲೀಸ್ ಸಿ.ಇ.ಟಿ. ಪರೀಕ್ಷೆಯ ನಿಮಿತ್ತ ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಯುತ ಪರೀಕ್ಷೆಯನ್ನು ನಡೆಸಲು ಕೆಜಿಎಫ್ ಪೊಲೀಸ್ ಜಿಲ್ಲೆಯು ಸರ್ವ ಸಿದ್ದವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ತಿಳಿಸಿದರು. ಅವರು ಕೆಜಿಎಫ್ ಉರಿಗಾಂನಲ್ಲಿನ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ, ಪರೀಕ್ಷಾ ಸಿಬ್ಬಂದಿಗಳ ಪೂರ್ವ ಸಿದ್ದತಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ನಾಗರೀಕ ಪೊಲೀಸ್ ಕಾನ್ಸ್‌ಟೆಬಲ್ ಮತ್ತು ಮಹಿಳಾ ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆಗಳನ್ನು…

Continue reading

ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

ಕೆಜಿಎಫ್: ಎಸ್‌ಪಿ ಕಛೇರಿಯಲ್ಲಿ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿಂದು ಆತ್ಮಹತ್ಯೆ ತಡೆಗಟ್ಟುವ ದಿನವನ್ನು ಆಚರಣೆ ಮಾಡಿ, ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಆರ್‌ಬಿ ಇನ್ಸ್‌ಪೆಕ್ಟರ್ ವೆಂಕಟೇಶಮೂರ್ತಿ ಅವರ ನೇತೃತ್ವದಲ್ಲಿ ನಡೆದ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು, ನಾವು ಸಾಮಾನ್ಯ ಮನುಷ್ಯರು, ಜೀವನದಲ್ಲಿ ಖುಷಿಯ ಕ್ಷಣಗಳನ್ನು ಬರಮಾಡಿಕೊಂಡ ಹಾಗೆಯೇ ದು:ಖದ ಕ್ಷಣಗಳನ್ನು ಸಹ ಒಪ್ಪಿಕೊಂಡು ಅರ್ಥ ಮಾಡಿಕೊಳ್ಳುತ್ತೇವೆ. ನಾವು ಒಬ್ಬಂಟಿಯಾಗಿಲ್ಲ, ತಮ್ಮ…

Continue reading

ಪತ್ರಿಕಾ ಪ್ರಕಟಣೆ ದಿನಾಂಕ 09.09.2020

ಕೆ.ಜಿ.ಎಫ್: ಅಕ್ರಮ ದಾಸ್ತಾನು ಗಾಂಜಾ ವಶ, ಓರ್ವನ ಬಂಧನ ಕೆಜಿಎಫ್ ಪೊಲೀಸ್ ಜಿಲ್ಲೆಯ ಮಾರಿಕುಪ್ಪಂ ಸರಹದ್ದಿನಲ್ಲಿರುವ ಕೃಷ್ಣಗಿರಿ ಲೈನಿನಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದ್ದ ಓರ್ವವನ್ನು ಬಂಧಿಸಿ, ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ರಾಬರ್ಟ್‌ಸನ್‌ಪೇಟೆ ವೃತ್ತದ ವಿಶೇಷ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿರುವುದಾಗಿ ಕೇಂದ್ರ ವಲಯ ಐಜಿಪಿ ಸೀಮಾಂತ ಕುಮಾರ್ ಸಿಂಗ್ ಅವರು ತಿಳಿಸಿದರು. ಅವರು ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ,…

Continue reading

ಪತ್ರಿಕಾ ಪ್ರಕಟಣೆ- ಶಾಂತಿಯುತವಾಗಿ ಗಣೇಶ ಚತುರ್ಥಿ, ಮೊಹರಂ ಆಚರಿಸಿ.

ಶಾಂತಿಯುತವಾಗಿ ಗಣೇಶ ಚತುರ್ಥಿ, ಮೊಹರಂ ಆಚರಿಸಿ. ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಮತ್ತು ಮೊಹರಂ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಇಲಕ್ಕಿಯಾ ಕರುಣಾಗರನ್ ಅವರು ಕರೆ ನೀಡಿದರು. ಶುಕ್ರವಾರದಂದು ಮದ್ಯಾಹ್ನ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿಯ ಸಭೆಯಲ್ಲಿ ಮಾತನಾಡುತ್ತಾ, ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಇದುವರೆವಿಗೂ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎಲ್ಲಾ ಸಮುದಾಯದವರು ಹಬ್ಬಗಳನ್ನು ಆಚರಿಸಿಕೊಂಡು…

Continue reading

ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸದ್ಬಾವನಾ ದಿನಾಚರಣೆ

ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸದ್ಬಾವನಾ ದಿನಾಚರಣೆ ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್‌ರೀಫ್ಸ್‌ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗುರುವಾರದಂದು ಬೆಳಿಗ್ಗೆ ಕೋಮು ಸೌಹಾರ್ದತೆಯ ಪ್ರತೀಕವಾಗಿ ಸದ್ಬಾವನಾ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸದ್ಬಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ…

Continue reading