ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಡಾ|| ಅಂಬೇಡ್ಕರ್ ಜಯಂತಿ ಆಚರಣೆ

ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ರವರ ೧೩೦ನೇ ಜನ್ಮದಿನಾಚರಣೆಯನ್ನು ಕೆಜಿಎಫ್‌ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬುಧವಾರದಂದು ಆಚರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಡಾ|| ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಡಾ|| ಅಂಬೇಡ್ಕರ್ ಅವರ ಆದರ್ಶ, ತತ್ವಗಳನ್ನು ಇಂದಿನ ಸಮಾಜದಲ್ಲಿ ಅಳವಡಿಸಿಕೊಂಡು ಮುನ್ನಡೆಯುವಂತೆ ಕರೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಡಾ|| ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಬಿ.ಕೆ.ಉಮೇಶ್, ಸಹಾಯಕ ಆಡಳಿತಾಧಿಕಾರಿ ಜಿ. ವಿಶ್ವನಾಥ, ಕಛೇರಿ ಶಾಖಾಧೀಕ್ಷಕಿ ಎ.ನಜೀಮಾಬಾನು, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಎಂ.ಸೂರ್ಯಪ್ರಕಾಶ್, ವಿ.ಸೋಮಶೇಖರ್, ಕೆ.ನಾಗರಾಜ್, ನಿಸ್ತಂತು ಇನ್ಸ್‌ಪೆಕ್ಟರ್ ನಾಗಪ್ಪ ಖಾನಾಪೂರ ಹಾಗೂ ಪಿಎಸ್‌ಐ ಆನಂದಬಾಬು, ಎನ್.ಜಿ.ಚೌಡಪ್ಪ, ಎಂ.ಎಲ್. ಮುನಿಯಪ್ಪ, ಆರ್. ವಿಜಯ್, ಸಯ್ಯದ್ ಅಮ್ಜದ್‌ಪಾಷ ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *