ದಿನದ ಅಪರಾಧಗಳ ಪಕ್ಷಿನೋಟ 11ನೇ ಜನವರಿ 2020

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ:‍10.01.2020 ರಂದು   ದಾಖಲಾಗಿರುವ   ಅಪರಾಧ ಪ್ರಕರಣಗಳ ವಿವರಗಳು.

 

– ರಸ್ತೆ ಅಪಘಾತಗಳು : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತ ಪ್ರಕರಣ ದಾಖಲಾಗಿರುತ್ತದೆಸ. ದೂರುದಾರರಾ ಶ್ರೀ. ಯೂಸುಫ್‌ ಪಾಷಾ  ಬಿನ್ ಪ್ಯಾರೇಜಾನ್‌, ಟಿಪ್ಪು ನಗರ, ಬಂಗಾರಪೇಟೆ ರವರು ದಿನಾಂಕ 10.01.2020 ರಂದು ಮಧ್ಯಾಹ್ನ 03.15 ಗಂಟೆಯಲ್ಲಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-08-ಎಲ್-112 ರಲ್ಲಿ ಕೋಲಾರ–ಬಂಗಾರಪೇಟೆ ಮುಖ್ಯ ರಸ್ತೆಯಲ್ಲಿರುವ ರಿಲಿಯನ್ಸ್ ಪೆಟ್ರೋಲ್ ಬಂಕ್ ಹತ್ತಿರ ಚಲಾಯಿಸಿಕೊಂಡು ಬರುತ್ತಿರುವಾಗ, ಹಿಂಬದಿಯಿಂದ ಆಟೋ ರಿಕ್ಷಾ ಸಂ ಕೆಎ-05-ಸಿ-2562 ನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು, ಎಡಬದಿಯಿಂದ ಓವರ್ ಟೇಕ್ ಮಾಡಿಕೊಂಡು ಬಂದು, ದೂರುದಾರರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಪಡಿಸಿದ ಪರಿಣಾಮ, ದೂರುದಾರರು ವಾಹನ ಸಮೇತ ಕೆಳಗೆ ಬಿದ್ದಾಗ, ರಕ್ತಗಾಯಗಳಾಗಿರುತ್ತದೆ.

Leave a Reply

Your email address will not be published. Required fields are marked *