ಪತ್ರಿಕಾ ಪ್ರಕಟಣೆ- ಶಾಂತಿಯುತವಾಗಿ ಗಣೇಶ ಚತುರ್ಥಿ, ಮೊಹರಂ ಆಚರಿಸಿ.

ಶಾಂತಿಯುತವಾಗಿ ಗಣೇಶ ಚತುರ್ಥಿ, ಮೊಹರಂ ಆಚರಿಸಿ.

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಮತ್ತು ಮೊಹರಂ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಇಲಕ್ಕಿಯಾ ಕರುಣಾಗರನ್ ಅವರು ಕರೆ ನೀಡಿದರು.

ಶುಕ್ರವಾರದಂದು ಮದ್ಯಾಹ್ನ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿಯ ಸಭೆಯಲ್ಲಿ ಮಾತನಾಡುತ್ತಾ, ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಇದುವರೆವಿಗೂ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎಲ್ಲಾ ಸಮುದಾಯದವರು ಹಬ್ಬಗಳನ್ನು ಆಚರಿಸಿಕೊಂಡು ಬಂದಿರುವುದು ನಿಜಕ್ಕೂ ಹೆಮ್ಮೆಯ ವಿಚಾರ, ಅದೇ ರೀತಿ ಈ ಬಾರಿ ಗಣೇಶ ಚತುರ್ಥಿ ಮತ್ತು ಮೊಹರಂ ಹಬ್ಬವನ್ನು ಸಹ ಶಾಂತಿಯುತವಾಗಿ ಆಚರಿಸಲು ಸಹಕರಿಸಬೇಕೆಂದು ಪೊಲೀಸ್ ಅಧೀಕ್ಷಕರು ಇಲಕ್ಕಿಯಾ ಕರುಣಾಗರನ್ ಅವರು ಕೋರಿದರು.
ಡಿವೈಎಸ್ಪಿ ಬಿ.ಕೆ. ಉಮೇಶ್ ಅವರು ಮಾತನಾಡಿ, ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ದಿಸೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಸಬೇಕಾದರೂ ನಿಯಮಾನುಸಾರ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿಯನ್ನು ಪಡೆದು ಕಾರ್ಯಕ್ರಮವನ್ನು ನಡೆಸುವಂತೆ ಕರೆ ನೀಡಿದರು.

ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕುಗಳ ವಿವಿಧ ಹಿಂದು ಸಂಘಟನೆಗಳವರು, ಮುಸ್ಲಿಂ ಸಮುದಾಯದವರು ಸಭೆಯಲ್ಲಿ ಭಾಗವಹಿಸಿದ್ದು, ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಪದ್ದತಿಗಳನ್ನು ಮುಂದುವರೆಸಿಕೊಂಡು ಹೋಗುವುದಾಗಿ, ಯಾವುದೇ ರೀತಿಯಲ್ಲೂ ಶಾಂತಿ, ಸೌಹಾರ್ದತೆಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಸಂಘಟಕರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್‌ಗಳು ಜಿ.ಪಿ.ರಾಜು, ಮುಸ್ತಾಕ್‌ಪಾಷ, ಸೂರ್ಯಪ್ರಕಾಶ್, ವೆಂಕಟರಮಣಪ್ಪ, ಸುನಿಲ್‌ಕುಮಾರ್, ವೆಂಕಟೇಶಮೂರ್ತಿ, ಆರ್‌ಪಿಐ ಮಂಜುನಾಥ ಮತ್ತು ಜಿಲ್ಲೆಯ ಪಿಎಸ್‌ಐಗಳು ಹಾಜರಿದ್ದರು.

Leave a Reply

Your email address will not be published. Required fields are marked *