ದಿನದ ಅಪರಾಧಗಳ ಪಕ್ಷಿನೋಟ 03ನೇ ಮೇ 2021

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ 03.05.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು. ಕೊಲೆ ಪ್ರಕರಣ : 01 ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ- 03-05-2021 ರಂದು ಬೆಳಿಗ್ಗೆ 5.33 ಗಂಟೆಯಲ್ಲಿ ಪಾಪೇನಹಳ್ಳಿ ಗ್ರಾಮದ  ವಾಸಿ ರತ್ನಪ್ಪ @ ಬುಡ್ಡಗಾ ಎಂಬುವರು ಈ ಕೇಸಿನ ದೂರುದಾರರಾದ ಸೋಮಶೇಖರ್‍, ಪಾಪೇನಹಳ್ಳಿ ಗ್ರಾಮದ ವಾಸಿ ರವರಿಗೆ ಪೋನ್ ಮಾಡಿ ತಿಳಿಸಿದ್ದು ಏನೆಂದರೆ ರಾತ್ರಿ 2.00 ಗಂಟೆಯಲ್ಲಿ ನಿಮ್ಮ ತೋಟದ…

Continue reading

ಪತ್ರಿಕಾ ಪ್ರಕಟಣೆ -ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶ ನಿಷೇಧ :

  ಎಲ್ಲೆಲ್ಲೂ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿಗಳನ್ವಯ ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲು ಸಹಕರಿಸಬೇಕೆಂದು ಧಾರ್ಮಿಕ ಕಾರ್ಯಗಳನ್ನು ಸರ್ಕಾರದ ಆದೇಶದಂತೆ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಕರೆ ನೀಡಿಲಾಗಿದೆ. ದಿನಾಂಕ 22.04.2021 ಗುರುವಾರದಂದು ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಎಲ್ಲಾ ಧರ್ಮಗಳ ಮುಖಂಡರುಗಳ ಶಾಂತಿ ಸಮಿತಿಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಇದುವರೆವಿಗೂ ಯಾವುದೇ ರೀತಿಯ…

Continue reading

ಪತ್ರಿಕಾ ಪ್ರಕಟಣೆ -ಡಿಎಆರ್ ನಲ್ಲಿ ನಗರ ಕೇಂದ್ರ ಗ್ರಂಥಾಲಯ ಉದ್ಘಾಟನೆ

ಕೆಜಿಎಫ್ ಪೊಲೀಸ್ ಜಿಲ್ಲೆಯ ಡಿ.ಎ.ಆರ್.ನಲ್ಲಿ ಹೊಸದಾಗಿ ನಗರ ಕೇಂದ್ರ ಗ್ರಂಥಾಲಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಉದ್ಘಾಟಿಸಿ, ಸಮಸ್ತ ನಾಗರೀಕರು ಇದರ ಸದುಪಯೋಗ ಪಡೆಯುವಂತೆ ಕೋರಿದರು. ದಿನಾಂಕ 20.04.2021 ರಂದು ಬೆಳಿಗ್ಗೆ ಚಾಂಫೀಯನ್‌ರೀಫ್ಸ್ ಡಿಎಆರ್ ಮೈದಾನ ಎದುರಿನಲ್ಲಿ ಸರ್ಕಾರದ ವತಿಯಿಂದ ಹೊಸದಾಗಿ ನಗರ ಕೇಂದ್ರ ಗ್ರಂಥಾಲಯವನ್ನು ಉದ್ಘಾಟಿಸಿ, ಮಾತನಾಡಿ ಗ್ರಂಥಾಲಯ ಇಲಾಖೆಯವರು ದಿನಪತ್ರಿಕೆ, ವಾರಪತ್ರಿಕೆಗಳು ಸೇರಿದಂತೆ ಎಲ್ಲಾ ರೀತಿಯ ಪುಸ್ತಕ ಬಂಡಾರವನ್ನು ಪ್ರಾರಂಭಿಸಿದ್ದು, ಡಿ.ಎ.ಆರ್. ಪೊಲೀಸ್ ಕ್ವಾರ್ಟಸ್ಸ್…

Continue reading

ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಡಾ|| ಅಂಬೇಡ್ಕರ್ ಜಯಂತಿ ಆಚರಣೆ

ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ರವರ ೧೩೦ನೇ ಜನ್ಮದಿನಾಚರಣೆಯನ್ನು ಕೆಜಿಎಫ್‌ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬುಧವಾರದಂದು ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಡಾ|| ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಡಾ|| ಅಂಬೇಡ್ಕರ್ ಅವರ ಆದರ್ಶ, ತತ್ವಗಳನ್ನು ಇಂದಿನ ಸಮಾಜದಲ್ಲಿ ಅಳವಡಿಸಿಕೊಂಡು ಮುನ್ನಡೆಯುವಂತೆ ಕರೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಡಾ|| ಅಂಬೇಡ್ಕರ್ ರವರ…

Continue reading

ನಿವೃತ್ತ ಹಾಗೂ ವರ್ಗವಾದ ಪೊಲೀಸ್ ಅಧಿಕಾರಿಗಳಿಗೆ ಬಿಳ್ಕೋಡುಗೆ

ಪತ್ರಿಕಾ ಪ್ರಕಟಣೆ ನಿವೃತ್ತ ಹಾಗೂ ವರ್ಗವಾದ ಪೊಲೀಸ್ ಅಧಿಕಾರಿಗಳಿಗೆ ಬಿಳ್ಕೋಡುಗೆ ಪ್ರತಿಯೊಬ್ಬ ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಉತ್ತಮವಾದ ಸೇವೆಯನ್ನು ಸಲ್ಲಿಸುವ ಮೂಲಕ, ಅವರ ಸೇವೆಯು ಮುಂದಿನ ಜನಾಂಗಕ್ಕೆ ಆದರ್ಶವಾಗುವ ಮೂಲಕ ಜನಸಾಮಾನ್ಯರ ಮನಗೆಲ್ಲುವ ಕಾರ್ಯ ಮಾಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಕರೆ ನೀಡಿದರು. ಅವರು ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಡಿ.ಎ.ಆರ್.ನ ಎಆರ್‌ಎಸ್‌ಐ ಯು.ಪ್ರಕಾಶನ್ ಮತ್ತು ನರಸಿಂಹನ್ ಅವರು ಮಾ.೩೧ ರಂದು ವಯೋ ನಿವೃತ್ತಿ ಹೊಂದಿದ…

Continue reading

ಪತ್ರಿಕಾ ಪ್ರಕಟಣೆ

ಕೆಜಿಎಫ್ : ಎರಡು ಗಾಂಜಾ ಪ್ರಕರಣಗಳಲ್ಲಿ ಆರೋಪಿಗಳ ಬಂಧನ, ಗಾಂಜಾ ವಶ ಕೆಜಿಎಫ್., ಮಾ. ೨೦ : ಕೆಜಿಎಫ್ ಪೊಲೀಸ್ ಜಿಲ್ಲೆಯ ರಾಬರ್ಟ್‌ಸನ್‌ಪೇಟೆ ಮತ್ತು ಉರಿಗಾಂ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಅಕ್ರಮ ಮಾರಾಟದ ಎರಡು ಪ್ರತ್ಯೇಕ ಗಾಂಜಾ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ತಿಳಿಸಿದ್ದಾರೆ. ಡಿವೈಎಸ್ಪಿ ಬಿ.ಕೆ. ಉಮೇಶ್ ಅವರ ಮಾರ್ಗದರ್ಶನದಲ್ಲಿ ಸಿ.ಇ.ಎನ್. ಪೊಲೀಸ್ ಇನ್ಸ್‌ಪೆಕ್ಟರ್ ಎಂ. ಸೂರ್ಯಪ್ರಕಾಶ್ ಮತ್ತು ಸಿಬ್ಬಂದಿಗಳು…

Continue reading

ಪತ್ರಿಕಾ ಪ್ರಕಟಣೆ – ಎರಡು ಗಾಂಜಾ ಪ್ರಕರಣಗಳಲ್ಲಿ ಆರೋಪಿಗಳ ಬಂಧನ, ಗಾಂಜಾ ವಶ

ಕೆಜಿಎಫ್ ಪೊಲೀಸ್ ಜಿಲ್ಲೆಯ ಆಂಡ್ರಸನ್‌ಪೇಟೆ ಮತ್ತು ಚಾಂಫೀಯನ್‌ರೀಫ್ಸ್ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಅಕ್ರಮ ಮಾರಾಟದ ಎರಡು ಪ್ರತ್ಯೇಕ ಗಾಂಜಾ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗಿದೆ. ಡಿವೈಎಸ್ಪಿ ಬಿ.ಕೆ. ಉಮೇಶ್ ಅವರ ಮಾರ್ಗದರ್ಶನದಲ್ಲಿ ಚಾಂಫೀಯನ್‌ರೀಫ್ಸ್ ಸರ್ಕಲ್ ಇನ್ಸ್‌ಪೆಕ್ಟರ್ ತಬರೆ ಆಲಂ ಪಾಷ ಮತ್ತು ಸಿಬ್ಬಂದಿಗಳು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆ ಕೈಗೊಂಡು, ಬುಧವಾರ ಸಂಜೆ ಎಸ್.ಟಿ. ಬ್ಲಾಕ್ ಸೈನೆಡ್ ಗುಡ್ಡದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ದಿಲೀಫ್‌ಕುಮಾರ್ ಬಿನ್:…

Continue reading

ಪ್ರತಿಯೊಬ್ಬರಿಗೂ ನಾಗರೀಕ ಬಂದೂಕು ತರಬೇತಿ ಅವಶ್ಯಕ

ಸಾರ್ವಜನಿಕರು ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸಲು ಪೊಲೀಸ್ ಇಲಾಖೆಯು ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳನ್ನು ಸಾಕಷ್ಟು ರೀತಿಯಲ್ಲಿ ಕೈಗೊಂಡಿದ್ದು, ಆದಾಗ್ಯೂ ತಮ್ಮ ಆತ್ಮ, ಪ್ರಾಣ, ಆಸ್ತಿ-ಪಾಸ್ತಿ ರಕ್ಷಣೆಗಾಗಿ ಪ್ರತಿಯೊಬ್ಬರಿಗೂ ನಾಗರೀಕ ಬಂದೂಕು ತರಬೇತಿಯ ಅವಶ್ಯಕತೆಯಿದೆ. ಕೆಜಿಎಫ್‌ನ ಚಾಂಫೀಯನ್ ರೀಫ್ಸ್ ನಲ್ಲಿನ ಡಿಎಆರ್‌ನಲ್ಲಿ ನಡೆಯುತ್ತಿರುವ ನಾಗರೀಕ ಬಂದೂಕು ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗುವ ಮೂಲಕ ನೆರವೇರಿಸುವ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕೆಜಿಎಫ್ ಪೊಲೀಸ್ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕುಗಳಿಂದ ೬೦…

Continue reading

ಪಿಎಸ್‌ಐ ಮೇಲೆ ಹಲ್ಲೆ ಮಾಡಿದ್ದ ಉಳಿದ ಆರೋಪಿಗಳ ಬಂಧನ

ಕೆಜಿಎಫ್ ಪೊಲೀಸ್ ಜಿಲ್ಲೆಯ ಆಂಡ್ರಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮಾ.೩ ರಂದು ತಡರಾತ್ರಿ ನಡೆದ ಪಿಎಸ್‌ಐ ಹರಿನಾಥ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಅಪ್ಪೇನ್‌ನನ್ನು ಬಂಧಿಸಿದ ಬೆನ್ನ ಹಿಂದೆಯೇ ಉಳಿದ ಮೂವರು ಆರೋಪಿಗಳನ್ನು ಸಹ ಬಂಧಿಸುವಲ್ಲಿ ಸ್ಥಳೀಯ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ವಿವಿದೆಡೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅಪ್ಪೇನ್‌ನನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…

Continue reading

ಕೆಜಿಎಫ್ : ನಾಗರೀಕ ಬಂದೂಕು ತರಬೇತಿ ಮಾ. 15 ರಿಂದ 21 -Civilian Rifle Training from 15.03.2021 to 21.03.2021,

Civilian Rifle Training from 15.03.2021 to 21.03.2021, for further details Contact 08153-260275/9480802706. ಕೆಜಿಎಫ್ ಪೊಲೀಸ್ ಜಿಲ್ಲೆಯ ಚಾಂಫೀಯನ್‌ರೀಫ್ಸ್‌ನಲ್ಲಿನ ಡಿ.ಎ.ಆರ್. ನಲ್ಲಿ ಮಾ.15 ರಿಂದ 21 ರ ವರೆಗೆ ನಾಗರೀಕ ಬಂದೂಕು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆಸಕ್ತರು ತಂತಮ್ಮ ಹೆಸರುಗಳನ್ನು ಡಿಎಆರ್ ಕಛೇರಿಯಲ್ಲಿ ನೊಂದಾಯಿಸಿಕೊಳ್ಳಲು, ಹೆಚ್ಚಿನ ವಿವರಗಳಿಗೆ ಡಿಎಆರ್ ಕಛೇರಿ ದೂರವಾಣಿ ಸಂಖ್ಯೆ: 08153260275 ಅಥವಾ 9480802706 ಅನ್ನು ಸಂಪರ್ಕಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು…

Continue reading